ಡಿವಿಜಿ ಸುದ್ದಿ, ದಾವಣಗೆರೆ: ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿಯಿಂದ ನಿಟ್ಟವಳ್ಳಿ ಬಡಾವಣೆಯ 32 ನೇ ವಾರ್ಡ್ ನಿಂದ ಗೆದ್ದಿದ್ದ ಉಮಾ ಪ್ರಕಾಶ್ , ಈ ಬಾರಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.
ಇವತ್ತು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ಅವರು, ಮನೆಗೆ ಮನೆಗೆ ತೆರಳಿ ಆಟೋ ಗುರುತಿಗೆ ಮತ ಹಾಕುವಂತೆ ಸಾರ್ವಜನಿಕರಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಇದೇ ವಾರ್ಡ್ ನಿಂದ ಸ್ಪರ್ಧಿಸಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಈ ಬಾರಿಯೂ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ, ಕೊನೆಯ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದೆ.
ನನಗೆ ಟಿಕೆಟ್ ಸಿಗದ ಹಿನ್ನೆಲೆ ನಮ್ಮ ಕಾರ್ಯಕರ್ತರು, ನೀವು ಈ ಬಾರಿ ನಿಲ್ಲಲೇಬೇಕು ಎಂದು ಒತ್ತಾಯ ಮಾಡಿದ ಹಿನ್ನೆಲೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದೇವೆ. ಈ ಬಾರಿ ನೂರಕ್ಕೆ ನೂರಷ್ಟು ಗೆದ್ದು ಬರುವ ವಿಶ‍್ವಾಸ ಇದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.



