ದಾವಣಗೆರೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ಗೆ ಆಗಮಿಸಿದ್ದಾರೆ. ಇಲ್ಲಿಂದಲೇ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಭದ್ರತೆ ಕಾರಣದಿಂದ ವಿವಿಧ ಸ್ಥಳಗಳಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ಜಿಎಂಐಟಿ ಕ್ಯಾಂಪಸ್ ನಿಂದ ಚಾಲನೆ ನೀಡಲಿದ್ದಾರೆ. ಈ ವೇಳೆ ದಾವಣಗೆರೆಯ ಗಾಂಧಿ ಭವನ, ಕೊಂಡಜ್ಜಿಯಲ್ಲಿನ ಪೊಲೀಸ್ ಪಬ್ಲಿಕ್ ಶಾಲೆಯನ್ನು ವರ್ಚುವಲ್ (ವಿಡಿಯೋ ಕಾನ್ಫರೆನ್ಸ್ ) ಮೂಲಕ ಉದ್ಘಾಟಿಸಲಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಕೊಂಡಜ್ಜಿ ಭಾಗದಲ್ಲಿ ಅರಣ್ಯ ಮತ್ತು ಕೆರೆ ಪ್ರದೇಶವಿದ್ದು, ಭದ್ರತೆ ಕಾರಣದಿಂದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿತ್ತು.