ದಾವಣಗೆರೆ: ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ನಾಳೆ ( ಸೆ. 05) ದಾವಣಗೆರೆ ಆಗಮಿಸಲಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಹಿರಿಯೂರಿನಿಂದ ಹೊರಟು, ಬೆ. 9.30 ಗಂಟೆಗೆ ದಾವಣಗೆರೆ ಸಕ್ರ್ಯೂಟ್ ಹೌಸ್‍ಗೆ ಆಗಮಿಸುವರು, ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಬೆ. 10 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿರುವ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಷ್ಕೃತರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಬೆಳಿಗ್ಗೆ 11-30 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



