ದಾವಣಗೆರೆ: ಮಂಗಳೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರೀಸಿಷನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸ್ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ. ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳಿಗೆ ತಮ್ಮ ನಿಯಮಿತ ಬೋಧನಾ ಚಟುವಟಿಕೆಗಳ ಜೊತೆಗೆ ಕೈಗಾರಿಕೆಯ ಅನುಭವ ದೊರೆಯುತ್ತದೆ. ಈ ಸಂಸ್ಥೆಯಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಸ್ವಉದ್ಯೋಗಿ ಅಥವಾ ಉದ್ಯೋಗಿಯಾಗಲು ಶಿಕ್ಷಣ ಸಹಕಾರಿಯಾಗುತ್ತದೆ ಮತ್ತು ಹೆಸರಾಂತ ಕೈಗಾರಿಕೆಗಳಲ್ಲಿ ಅತ್ಯುತ್ತಮವಾದ ಉದ್ಯೋಗಾವಕಾಶಗಳು ಲಭ್ಯವಾಗುತ್ತದೆ. ಇಲ್ಲಿಯವರೆಗೂ ಜಿಟಿಟಿಸಿಯಲ್ಲಿ ಡಿಪ್ಲೋಮಾ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉದ್ಯೋಗ ಪಡೆದಿದ್ದಾರೆ ಹಾಗೂ ಕೆಲವು ವಿದ್ಯಾರ್ಥಿಗಳು ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಿ ಯಶಸ್ವಿಯಾಗಿದ್ದಾರೆ. ಡಿಪ್ಲೋಮಾ ಅಂತಿಮ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ ಕನಿಷ್ಠ ರೂ. 10000 ವಿದ್ಯಾರ್ಥಿ ವೇತನ ದೊರೆಯುತ್ತದೆ.
ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗುವುದು. ವಿದ್ಯಾರ್ಥಿಗಳಿಗೆ ಉಚಿತವಾಗಿ ಹಾಸ್ಟೆಲ್ ವ್ಯವಸ್ಥೆ ಇರುತ್ತದೆ.
ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಪ್ರವೇಶ ನೀಡಲಾಗುವುದು. ಪಿಯುಸಿ(ಸೈನ್ಸ್) ಮತ್ತು ಐಟಿಐ ಪಾಸಾದ ಅಭ್ಯರ್ಥಿಗಳು ನೇರವಾಗಿ ಡಿಪ್ಲೋಮಾ ಎರಡನೆ ವರ್ಷಕ್ಕೆ ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ಲಾಟ್ ನಂ. 7ಇ, ಕೆಐಎಡಿಬಿ ಕೈಗಾರಿಕಾ ಪ್ರದೇಶ, ಬೈಕಂಪಾಡಿ, ಮಂಗಳೂರು-575011. ಅಥವಾ ಮೊಬೈಲ್ ನಂ:7975621917, ದೂರವಾಣಿ ಸಂಖ್ಯೆ:0824-2408003 ಅನ್ನು ಸಂಪರ್ಕಿಸಬಹುದು ಎಂದು ಮಂಗಳೂರು ಜಿ.ಟಿ.ಟಿ.ಸಿ. ಯ ತರಬೇತಿ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..