ದಾವಣಗೆರೆ: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಬಂಜಾರ ಅಥವಾ ಲಂಬಾಣಿ ಸಮುದಾಯದವರು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿ ಸೆ.05 ರಂದು ನಿಗದಿಯಾಗಿತ್ತು. ಇದೀಗ ಅರ್ಜಿಯ ಅವಧಿಯನ್ನು ಸೆ. 15 ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಫಲಾಪೇಕ್ಷಿಗಳಿಗೆ ನಿಗಮದಿಂದ ಸಾಲ ಮತ್ತು ಸಹಾಯಧನ ಸೌಲಭ್ಯ ಕಲ್ಪಿಸಲು ಸ್ವಯಂ ಉದ್ಯೋಗ ಯೋಜನೆ(ನೇರಸಾಲ), ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ(ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿ ಅರ್ಜಿ ಸಲ್ಲಿಸುವ ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ನಿಗಮದ ವೆಬ್‍ಸೈಟ್ www.banjarathanda.kar.nic.in ಮೂಲಕ ಸೆ.15 ರವರೆಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯಲ್ಲಿನ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿಯನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.