ದಾವಣಗೆರೆ: ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವತಿಯಿಂದ 2021-22 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2021 ರ ಅಕ್ಟೋಬರ್ 20 ರಂದು ಜರುಗುವ ಮಹರ್ಷಿ ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಮಟ್ಟದಲ್ಲಿ ನೀಡಲಿದ್ದು, ಸರ್ಕಾರದ ಮಾರ್ಗಸೂಚಿಗಳನ್ವಯ ಪ್ರಶಸ್ತಿಗೆ ಅರ್ಹರಾಗಿರುವ ವ್ಯಕ್ತಿಗಳನ್ನು ಆಯ್ಕೆಗೊಳಿಸಲು ಉದ್ದೇಶಿಸಲಾಗಿದೆ.
ಆಸಕ್ತರು ಜಿಲ್ಲಾ ಆಡಳಿತ ಭವನದ ಕೊಠಡಿ ಸಂಖ್ಯೆ 45 ರಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿಯಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸೆ.18 ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08192-263546 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



