ಹಾವೇರಿ: ಫಸಲಿಗೆ ಬಂದ 700 ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ.
ಇನ್ನೆನ್ನು ಫಸಲು ಬಿಡುತ್ತಿದ್ದ ಅಡಿಕೆ ಮರಗಳನ್ನು ಕಡಿದು ಹಾಕಲಾಗಿದ್ದು, ಆಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಖಲೀಲ ಅಹಮ್ಮದ ವಾಲೀಕಾರ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿದ್ದ 700 ಕ್ಕೂ ಅಧಿಕ ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.



