ದಾವಣಗೆರೆ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಪ್ರಸಕ್ತ ಸಾಲಿಗೆ ದಾವಣಗೆರೆ ಜಿಲ್ಲೆಯಾದ್ಯಂತ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಸಮೀಕ್ಷೆಯನ್ನು ಕೈಗೊಳ್ಳಲು ಆಸಕ್ತ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ಸಮೀಕ್ಷೆ ನಡೆಸಲು ಮಕ್ಕಳ ಕ್ಷೇತ್ರದಲ್ಲಿ5 ವರ್ಷ ಕೆಲಸ ನಿರ್ವಹಿಸಿರುವ ಆಸಕ್ತ ಅರ್ಹ ಸ್ವಯಂ ಸೇವಾ ಸಂಸ್ಥೆಗಳು, ಸೆ.23 ರೊಳಗೆ ಯೋಜನಾ ನಿರ್ದೇಶಕರ ಕಚೇರಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕೊಠಡಿ ಸಂಖ್ಯೆ 42, ಜಿಲ್ಲಾಡಳಿತ ಭವನ, ದಾವಣಗೆರೆ ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



