ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮದಿಂದಲೇ ಮಳೆಯಾಗಲಿದೆ.
ಜುಲೈ ತಿಂಗಳಿನಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಹೇಳಿತ್ತು.