ದಾವಣಗೆರೆ: ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದಾವಣಗೆರೆ ಜಿಲ್ಲಾ ಪ್ರಾಣಿ ದಯಾ ಸಂಘ ಸಂಯುಕ್ತಾಶ್ರಯದಲ್ಲಿ ಸೆ. 28 ರಂದು ದಾವಣಗೆರೆಯ ಪಶು ಆಸ್ಪತ್ರೆ ಆವರಣದಲ್ಲಿ ನಾಯಿಗಳಿಗೆ ಉಚಿತವಾಗಿ ರೇಬಿಸ್ (ಹುಚ್ಚು ನಾಯಿ ರೋಗ) ನಿರೋಧಕ ಲಸಿಕೆ ಹಾಕಲಾಗುವುದು.ಪ್ರಾಣಿ ಪ್ರಿಯರು ತಮ್ಮ ಶ್ವಾನಗಳಿಗೆ ಲಸಿಕೆ ಹಾಕಿಸಿ ಇದರ ಪ್ರಯೋಜನ ಪಡೆಯಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



