Connect with us

Dvgsuddi Kannada | online news portal | Kannada news online

SSLC ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ಗುಡ್ ನ್ಯೂಸ್:  ಸರ್ಕಾರದ ಪ್ರೋತ್ಸಾಹಧನ ಮಂಜೂರು

ದಾವಣಗೆರೆ

SSLC ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ಗುಡ್ ನ್ಯೂಸ್:  ಸರ್ಕಾರದ ಪ್ರೋತ್ಸಾಹಧನ ಮಂಜೂರು

ದಾವಣಗೆರೆ:  ಸಮಾಜ ಕಲ್ಯಾಣ ಇಲಾಖೆಯು 2020-21ನೇ ಸಾಲಿನ ಶೈಕ್ಷಣಿಕ ಸಾಲಿನ  ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.60 ರಿಂದ 74.99 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡುವ ಸರ್ಕಾರ ನಿರ್ಧರಿಸಿದೆ. ಕುರಿತು ಕರ್ನಾಟಕ ಪ್ರೌಡ ಶಿಕ್ಷಣ ಮಂಡಳಿಯಿಂದ ಮಾಹಿತಿ ಪಡೆದು, ಅರ್ಹ ವಿದ್ಯಾರ್ಥಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನ ಜಮೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಆದರೆ, 2019-20 ಹಾಗೂ 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಸಿಬಿಎಸ್‍ಇ/ಐಸಿಎಸ್‍ಇ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಬ್ಯಾಂಕ್ ಉಳಿತಾಯ ಖಾತೆಗೆ ಆಧಾರ್ ಲಿಂಕ್ ಮಾಡಿಸಿ, ಸೂಕ್ತ ದಾಖಲೆಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top