ಬೆಳಗಾವಿ: ಗುತ್ತಿಗೆದಾರರೊಬ್ಬರಿಂದ 68 ಸಾವಿರ ಲಂಚ ಸ್ವೀಕರಿಸುವಾಗ ಇಬ್ಬರು ಅಧಿಕಾರಿಗಳಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಅಥಣಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಇಂದ್ರಪ್ಪ ಹಾಗೂ ಕಚೇರಿಯ ವ್ಯವಸ್ಥಾಪಕ ದೀಪಕ ಕೃಷ್ಣಾಜಿ ಕುಲಕರ್ಣಿಯನ್ನು ಎಸಿಬಿ ವಶಕ್ಕೆ ಪಡೆದಿದೆ. ಜಲಜೀವನ ಮಿಷನ್ ಯೋಜನೆಯಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಬೆಳಗಾವಿಯ ಗುತ್ತಿಗೆದಾರಿಂದ ಈ ಅಧಿಕಾರಿಗಳು ಶೇ.3ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ಈ ದೂರು ಆಧಾರಿಸಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.