ದಾವಣಗೆರೆ: ಕಾಂಗ್ರೆಸ್ ಪಕ್ಷದ ನಾಯಕರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತತ್ವ ಸಿದ್ಧಾಂತ ಒಪ್ಪಿಕೊಂಡು ಪಕ್ಷ ಸೇರಲು ಸಿದ್ಧರಾಗಿದ್ದಾರೆ. 2023 ಕ್ಕೆ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದರು. ಇನ್ನು ಭಾರತ್ ಬಂದ್ ಯಾವ ಪುರುಷಾರ್ಥಕ್ಕೆ ಮಾಡ್ತಾರೆ. ಜನರು ಈ ನಕಲಿ ರೈತರ ಹೋರಾಟ ಬೆಂಬಲಿಸುವುದಿಲ್ಲ. ಇದು ಕಾಂಗ್ರೆಸ್ ಬೆಂಬಲಿತ ಪ್ರತಿಭಟನೆ ಎಂದರು.



