ಬೆಂಗಳೂರು: ರಾಜ್ಯದ ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅ.30ಕ್ಕೆ ಮತದಾನ ನಡೆಯಲಿದ್ದು, ನ. 02ರಂದು ಫಲಿತಾಂಶ ಹೊರ ಬೀಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
- ಚುನಾವಣೆ ಪ್ರಕ್ರಿಯೆ
- ಅ. 1ರಂದು ಅಧಿಸೂಚನೆ
- ಅ. 8ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
- ಅ. 11ರಂದು ನಾಮಪತ್ರ ಪರಿಶೀಲನೆ
- ಅ.13 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ
- ಅ. 30ರಂದು 2 ಕ್ಷೇತ್ರಗಳಿಗೆ ಮತದಾನ
- ನ. 02ರಂದು ಮತ ಎಣಿಕೆ
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸಿ.ಎಂ. ಉದಾಸಿ ಹಾಗೂ ಸಿಂದಗಿಯ ಎಂ.ಸಿ. ಮನಗೂಳಿ ನಿಧನದಿಂದ ೆರಡು ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕ ಘೋಷಿಸಲಾಗಿದ್ದು, ಈ ಚುನಾವಣೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯಾಗಿ ಪರಿಣಮಿಸಿದೆ.



