ದಾವಣಗೆರೆ: ನಾಳೆ (ಅ. 1) ನವದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆಯುವ ಸ್ವಚ್ಛ ಭಾರತ್ 2.0 ಹಾಗೂ ಅಮೃತ್ ಯೋಜನೆ 2.0 ಕುರಿತ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಎಸ್. ಟಿ. ವೀರೇಶ್ ಅವರಿಗೆ ಆಹ್ವಾನ ಬಂದಿದೆ.
ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮೆಯರ್ ಎಸ್ .ಟಿ. ವೀರೇಶ್ ಅವರು ಸಹ ಭಾಗಿಯಾಗಲಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ, ಶಿವಮೊಗ್ಗ ಮಹಾನಗರ ಪಾಲಿಕೆ, ಹಾಗೂ ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಗೆ ಆಹ್ವಾನಿಸಲಾಗಿದೆ. ಇದಲ್ಲದೆ ನಗರಸಭೆ ಸೇರಿದಂತೆ ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿನ ಅಧ್ಯಕ್ಷರು, ಕಮೀಷನರ್ ಸೇರಿದಂತೆ ಒಟ್ಟು ರಾಜ್ಯದ 13 ಮಂದಿಗೆ ಪ್ರಧಾನಿ ಮೋದಿ ಅವರಿಂದ ಆಹ್ವಾನ ಬಂದಿದೆ.



