ದಾವಣಗೆರೆ: ಶಿಷ್ಯ ವೇನನಕ್ಕೆ ಆಗ್ರಹಿಸಿ ಜೆಜೆಎಂ ವೈದ್ಯಕೀಯ ವಿದ್ಯಾರ್ಥಿಗಳು ನಿನ್ನೆ ರಾತ್ರಿ (ಸೆ.30) ಕ್ಯಾಂಡಲ್ ಹಚ್ಚಿ ಪ್ರತಿಭಟಿಸಿದ್ದಾರೆ.
ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆ ಮುಂದೆ ಜಮಾಯಿಸಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಹಿಂದೆ ಜಯದೇವ ಸರ್ಕಲ್ ಬಳಿ ಪ್ರತಿಭಟನೆ ನಡೆದಾಗ ಶಿಷ್ಯ ವೇತನ ನೀಡುವ ಭರವಸೆ ನೀಡಲಾಗಿತ್ತು. ಇದೀಗ ಶಿಷ್ಯವೇತನ ನೀಡಲು ಸರ್ಕಾರ ಮತ್ತು ಜೆಜೆಎಂ ಕಾಲೇಜ್ ಆಡಳಿತ ಮಂಡಳಿ ಮುಂದಾಗದ ಹಿನ್ನೆಲೆ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಂಡಿದ್ಧಾರೆ.
ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿಯೂ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಕೋಟಾದಿಂದ ಆಯ್ಕೆಯಾಗಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 20 ಸಾವಿರ ಶಿಷ್ಯವೇತನ ನೀಡಬೇಕು. ಆದರೆ, ಹಣ ನೀಡದ ಹಿನ್ನೆಲೆ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.