ಡಿವಿಜಿ ಸುದ್ದಿ, ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯ ವಿದ್ಯಾನಗರದ 39 ವಾರ್ಡ್ ನ ಮಾಗನೂರು ಬಸಪ್ಪ ಶಾಲೆಯಲ್ಲಿ ಮತ ಚಲಾಯಿಸಿದರು.
ಮತದಾನ ನಂತರ ಮಾತನಾಡಿದ ಅವರು, ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದ್ದು, 30 ರಿಂದ 32 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ನಮ್ಮಲ್ಲಿ ಯಾವುದೇ ಬಂಡಾಯ ಇಲ್ಲ. ಸಣ್ಣಪುಟ್ಟ ಬಂಡಾಯ ಯಾವ ರೀತಿಯ ಪ್ರಭಾವ ಬೀರದು. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಅಯೋಧ್ಯೆ ತೀರ್ಪು ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ. ತೀರ್ಪು ಬಂದು ಮೂರು ದಿನವಾದ್ದರೂ ದೇಶದಲ್ಲಿ ಒಂದೇ ಒಂದು ಅಶಾಂತಿ ಸೃಷ್ಟಿಯಾಗಲಿಲ್ಲ. ಮುಂದಿನ ದಿನಗಳಲ್ಲಿ ರಾಮ ಮಂದಿರ ಕಟ್ಟುತ್ತೇವೆ ಎಂದು ತಿಳಿಸಿದರು.



