ದಾವಣಗೆರೆ: ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಪದವಿ ಅಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅಂತಿಮ ಅವಕಾಶ ನೀಡಲಾಗಿದೆ.
ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕ ಪದವಿಗಳಿಗೆ 2003-04 ರಲ್ಲಿ ಹಾಗೂ ಆ ನಂತರ ಪ್ರವೇಶ ಪಡೆದ ಸೆಮಿಸ್ಟರ್ ಸ್ಕೀಂನಲ್ಲಿ ಅಧ್ಯಯನ ಮಾಡಿ, ಕೋರ್ಸ್ ಪೂರ್ಣಗೊಳಿಸಲು ನಿಗದಿಪಡಿಸಲಾಗಿದ್ದ ಅವಧಿ ಮುಗಿದರೂ ಸಹ, ಈವರೆಗೂ ಪದವಿ ಪೂರ್ಣಗೊಳಿಸಲಾಗದೆ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೊನೆಯ ಅವಕಾಶವನ್ನು ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು www.kuvempu.ac.in ವೆಬ್ಸೈಟ್ನಲ್ಲಿ ಪರೀಕ್ಷಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಇಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಜನವರಿ, ಫೆಬ್ರವರಿ 2022ರ ಮಾಹೆಯಲ್ಲಿ ನಡೆಸಲು ಯೋಜಿಸಲಾಗಿದೆ. ಅಕ್ಟೋಬರ್-2021 ರ ಮೊದಲ ವಾರದಿಂದ ಆನ್ಲೈನ್ನಲ್ಲಿ ಪರೀಕ್ಷಾ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08282-256166, 7022254997 ಕ್ಕೆ ಸಂಪರ್ಕಿಸಬಹುದು ಎಂದು ಕುವೆಂಪು ವಿವಿ. ಮೌಲ್ಯಮಾಪನ ಕುಲಸಚಿವ ಪ್ರೊ. ಸಿ.ಎಂ.ತ್ಯಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.