Connect with us

Dvgsuddi Kannada | online news portal | Kannada news online

ದಾವಣಗೆರೆ: ದಸರಾ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ; 400 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ..!

ದಾವಣಗೆರೆ

ದಾವಣಗೆರೆ: ದಸರಾ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ; 400 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ..!

ದಾವಣಗೆರೆ:  ಅ.7 ರಿಂದ  ಅ.15  ಶುಕ್ರವಾರದವರೆಗೆ ಒಟ್ಟು 9 ದಿನಗಳ ಕಾಲ ಆಚರಿಸುವ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಬಂಧಿಸಿರುವ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದ್ದಾರೆ.

ನಾಡಹಬ್ಬ ದಸರಾ, ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳ ಕಾಲವಧಿಯಲ್ಲಿ ಜನಸಂಚಾರ, ಜನರ ಒಗ್ಗೂಡುವಿಕೆಯನ್ನು ತಡೆಗಟ್ಟಲು ಹಾಗೂ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಇರುವುದರಿಂದ ಮುಂಬರುವ ಹಬ್ಬಗಳನ್ನು ಸರಳವಾಗಿ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲು ಮಾರ್ಗಸೂಚಿಯನ್ನು ಹೊರಡಿಸಿದೆ.

ಮೈಸೂರು ದಸರಾ ಹೊರತಾಗಿ ರಾಜ್ಯದ ಇತರೆಡೆ ನಡೆಸಲಾಗುವ ದಸರ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ದಸರಾ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕರ್ತವ್ಯ ನಿರತ ಸಿಬ್ಬಂದಿಗಳು, ಅಧಿಕಾರಿಗಳು, ಕಲಾವಿದರು, ರಕ್ಷಣಾ ಸಿಬ್ಬಂದಿಗಳು, ಅಧಿಕಾರಿಗಳು, ಕಲಾವಿದರು, ರಕ್ಷಣಾ ಸಿಬ್ಬಂದಿಗಳು ಮತ್ತು ಮಾಧ್ಯಮದವರೂ ಒಳಗೊಂಡAತೆ ಎಲ್ಲರೂ ಅಕ್ಟೋಬರ್ 4 ರ ನಂತರ ಕೋವಿಡ್ ಆರ್‌ಟಿಪಿಸಿಆರ್ ತಪಾಸಣೆ ನಡೆಸಿ ಸೋಂಕು ಇಲ್ಲದ ಬಗ್ಗೆ ಪ್ರಮಾಣ ಪತ್ರ ಪಡೆಯಬೇಕು. ಮತ್ತು ಇವರೆಲ್ಲರೂ ಕನಿಷ್ಠ 1 ಡೋಸ್ ಕೋವಿಡ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು.

ನಾಡಹಬ್ಬ ದಸರಾ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗುವುದು. ಹಬ್ಬ ಹರಿದಿನಗಳಲ್ಲಿ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ದಸರಾ ಹಬ್ಬವನ್ನು ಅದೇ ರೀತಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬಾರದಂತೆ ಕಾಪಾಡಬೇಕು.

ಕೋವಿಡ್ ಸೋಂಕು ತಡೆಗಟ್ಟಲು ಈ ವರ್ಷ ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬವನ್ನು ವರ್ಚುವಲ್ ಮೂಲಕ ಸಾರ್ವಜನಿಕರು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಅರಮನೆಯ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸ್‌ಗಳನ್ನು ಕಡ್ಡಾಯ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಅಕ್ಟೋಬರ್ 7 ರಂದು ನಡೆಯುವ ದಸರಾ ಉದ್ಘಾಟನೆಗೆ 100 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಅರಮನೆಯಲ್ಲಿ ಸಂಜೆ ನಡೆಯುವ ಸಾಂಸ್ಕçತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಮಾತ್ರ ಪ್ರವೇಶಾವಕಾಶ ಹಾಗೂ ಅಕ್ಟೋಬರ್ 15 ರಂದು ಜಂಬು ಸವಾರಿಗೆ 500 ಜನರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ.

ದಸರಾ ಆಚರಣೆಯಲ್ಲಿ ಮಾಸ್ಕ್ ಧರಿಸದ ಸಾರ್ವಜನಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top