ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ಸ್ಪೋಟ್ರ್ಸ್ ಮಸ್ಸರ್, ಸ್ಪೋಟ್ರ್ಸ್ ನ್ಯೂರ್ಟೀಷಿನಿಸ್ಟ್ಸ್, ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಬೆಂಗಳೂರಿನ ಜಯಪ್ರಕಾಶ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರವನ್ನು ರಾಜ್ಯ ಉತಕೃಷ್ಟತಾ ಕೇಂದ್ರ ಎಂದು ಘೋಷಿಸಿ ಮಂಜೂರು ಮಾಡಿದ್ದು, ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ಇಲ್ಲಿ ಪಡೆದು, ಭರ್ತಿ ಮಾಡಿದ ನಮೂನೆಯನ್ನು ಅ.11 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-237480 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದರು.



