ದಾವಣಗೆರೆ: ಆಯುಧ ಪೂಜೆ ಪ್ರಯುಕ್ತ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಅವರು ಆಯುಧ ಪೂಜೆ ನೆರೆವೇರಿಸಿದರು. ಈ ಸಂಧರ್ಭದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಹಾಗೂ ಜಿಲ್ಲೆಯ ಸಮಸ್ತ ಜನತೆಗೆ ಆಯುಧ ಪೂಜಾ, ನಾಡ ಹಬ್ಬ ದಸರಾ, ವಿಜಯದಶಮಿಯ ಶುಭಕೋರಿದರು. ಈ ವೇಳೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೀವ್ ಎಂ.ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಎ. ಎಸ್.ಪಿ ಕನಿಕಾ ಸಕ್ರಿವಾಲ್ , ಡಿವೈಎಸ್ಪಿ ಪ್ರಕಾಶ್ ಪಿ.ಬಿ., ಪೊಲೀಸ್ ನಿರೀಕ್ಷಕ ಕಿರಣ್ ಕುಮಾರ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.



