Connect with us

Dvgsuddi Kannada | online news portal | Kannada news online

BREAKING NEWS: 1ರಿಂದ 5ನೇ ತರಗತಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್; ಅ. 25ರಿಂದಲೇ ಶಾಲೆ ಆರಂಭ

Vidhana Soudha

ಪ್ರಮುಖ ಸುದ್ದಿ

BREAKING NEWS: 1ರಿಂದ 5ನೇ ತರಗತಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್; ಅ. 25ರಿಂದಲೇ ಶಾಲೆ ಆರಂಭ

ಬೆಂಗಳೂರು:  ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರ್ಕಾರ ಗ್ರನ್ ಸಿಗ್ನಲ್ ನೀಡಿದೆ.  ತರಗತಿಯಲ್ಲಿ ಶೇ. 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಶಾಲೆ ತೆರೆಯಲು ಅವಕಾಶ ನೀಡಲಾಗಿದೆ.  ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್​​ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.

ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆಯಿಂದ ತೀರ್ಮಾನಿಸಿದ್ದು,  ಶಾಲೆ ಆರಂಭಕ್ಕೆ ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ತಜ್ಞರ ಸಮ್ಮತಿ ಒಪ್ಪಿಗೆ ನೀಡಿದ್ದಾರೆ.

ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಅನುಮತಿ ಕಡ್ಡಾಯ ಎಂದು ತಿಳಿಸಲಾಗಿದೆ. ಶಿಕ್ಷಕರು ಕಡ್ಡಾಯವಾಗಿ 2 ಡೋಸ್​ ಲಸಿಕೆ ಪಡೆದಿರಬೇಕು ಎಂದೂ ಹೇಳಲಾಗಿದೆ. ತರಗತಿಯಲ್ಲಿ ಶೇಕಡಾ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ  ಶಾಲೆ ತೆರೆಯಲಾಗುವುದು. ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್​​ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top