ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ರೈತರ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 50 ಸಾವಿರ ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಹಾನಿ ಬಗ್ಗೆ ಅಧಿಕಾರಿಗಳು ಸರ್ವೇ ನಡೆಸುತ್ತಿದ್ದು, 15 ದಿನದಲ್ಲಿ ಪೂರ್ಣಗೊಳ್ಳಲಿದೆ. ವರದಿ ಆಧಾರದ ಮೇಲೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ ಗೆ 50 ಸಾವಿರವನ್ನು 2 ತಿಂಗಳಲ್ಲಿ ಪರಿಹಾರ ನೀಡುವುದಾಗಿ ತಿಳಿಸಿದ್ಧಾರೆ. ಈ ಮೊತ್ತ ದೇಶದಲ್ಲಿಯೇ ಹಾನಿ ಪ್ರದೇಶದ ರೈತರಿಗೆ ಪಾವತಿಸಿದ ಅತಿಹೆಚ್ಚು ಪರಿಹಾರವಾಗಿದೆ.