Connect with us

Dvgsuddi Kannada | online news portal | Kannada news online

6 ಕೋಟಿ ನಕಲಿ ನೋಟ್ ಜೆರಾಕ್ಸ್ ಮಾಡಿ ವಂಚನೆ ಮಾಡುತ್ತಿದ್ದ ಗ್ಯಾಂಗ್ ವಶ

ಕ್ರೈಂ ಸುದ್ದಿ

6 ಕೋಟಿ ನಕಲಿ ನೋಟ್ ಜೆರಾಕ್ಸ್ ಮಾಡಿ ವಂಚನೆ ಮಾಡುತ್ತಿದ್ದ ಗ್ಯಾಂಗ್ ವಶ

ಬೆಂಗಳೂರು: ನಕಲಿ ನೋಟ್  ಜೆರಾಕ್ಸ್ ಮಾಡಿ ವಂಚನೆ ಮಾಡುತ್ತಿದ್ದ ಏಳು ಮಂದಿಯ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಲಾಗಿದೆ. ಇವರಿಂದ 6 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಗ್ಯಾಂಗ್‌ ಬ್ಯಾನ್ ಆಗಿರುವ ಒಂದು ಸಾವಿರ ರೂ. ಮುಖಬೆಲೆಯ ನೋಟು ಜೆರಾಕ್ಸ್ ಮಾಡಿ ವಂಚನೆ ಯತ್ನ‌ ಮಾಡುತ್ತಿತ್ತು, ಇದಲ್ಲದೆ ಬ್ಲಾಕ್ ಅಂಡ್ ವೈಟ್ ದಂಧೆ ನಡೆಸಲು ಸಂಚು ನಡೆಸಿ,  ಬ್ಯಾನ್ ಆಗಿರುವ  ನೋಟುಗಳ ಬದಲಾವಣೆ ಮಾಡುತ್ತೇವೆಂದು ಮೋಸ ಮಾಡುತ್ತಿದ್ದರು. ದಾಳಿ  ವೇಳೆ  75 ಲಕ್ಷ ನಿಷೇಧಿತ ಅಸಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಆಧರಿಸಿ  ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ತನಿಖೆ ವೇಳೆ 1 ಸಾವಿರ ಹಾಗೂ 500 ಮುಖಬೆಲೆಯ 70 ಲಕ್ಷ ನಿಷೇಧಿತ ನೋಟುಗಳು ವಶವಾಗಿವೆ. ಬಳಿಕ ಆರೋಪಿಗಳ ವಿಚಾರಣೆ ನಡೆಸಿದಾಗ ಮತ್ತಷ್ಟು ಮಾಹಿತಿ ಬಹಿರಂಗವಾಗಿದೆ. ಕಾಸರಗೋಡಿನಲ್ಲಿ ಬಾಕಿ ಹಣ ಇದೆ ಎಂದು ಆರೋಪಿಗಳು ಹೇಳಿದ್ದಾರೆ. ಕಾಸರಗೋಡಿಗೆ ಹೋದಾಗ 6 ಕೋಟಿ ಜೆರಾಕ್ಸ್ ನೋಟುಗಳು ಪತ್ತೆಯಾಗಿರುವುದಲ್ಲದೆ 16 ಮೂಟೆ ಪೇಪರ್ ಗಳು ಪೊಲೀಸರ ವಶವಾಗಿವೆ. ಗೋವಿಂದಪುರ ಪೊಲೀಸರಿಂದ ಮಂಜುನಾಥ್, ದಯಾನಂದ ಸೇರಿ 7 ಆರೋಪಿಗಳ ಬಂಧನ ನಡೆದಿದೆ. ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top