ಹಾವೇರಿ: ಹಾನಗಲ್ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿರಂತರವಾಗಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತರೂಢ ಬಿಜೆಪಿ ಸೋಲಿನ ಭೀತಿ ಎದುರಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತವರು ಜಿಲ್ಲೆಯಲ್ಲಿಯೇ ಸೋಲಿನ ಮುಖಭಂಗವಾಗುವ ಸಾಧ್ಯತೆ ಹೆಚ್ಚಿದೆ.
15 ನೇ ಸುತ್ತು ಮುಕ್ತಾಯಕ್ಕೆ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 68,543 ಮತಗಳನ್ನು ಪಡೆದರೆ ಬಿಜೆಪಿಯ ಶಿವರಾಜ್ ಸಜ್ಜನರ 62,228 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ನ ನಿಯಾಜ್ ಶೇಖ್ 714 ಮತಗಳನ್ನು ಗಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್‌ಗೆ ಮುನ್ನಡೆ ಸಿಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ತೆರಳಿದರು. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮಾತನಾಡಿ, ಹಾನಗಲ್‌ನಲ್ಲಿ ಹಣ ಬಲ ಸೋತಿದೆ. ಜನರು ಸರ್ಕಾರದ ಜನವಿರೋಧಿ ನೀತಿ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಆಡಳಿಯ ಯಂತ್ರ ಸಂಪೂರ್ಣ ಹದಗೆಟ್ಟಿದೆ ಎಂದ ವಾಗ್ದಾಳಿ ನಡೆಸಿದರು.



