ಪುಣೆ: ಮಹಾರಾಷ್ಟ್ರ ರಾಜ್ಯದ ಅಹ್ಮದ್ನಗರ ಜಿಲ್ಲಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐಸಿಯುವನಲ್ಲಿದ್ದ 10 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.
ಆಸ್ಪತ್ರೆಯ ಐಸಿಯು ಘಟಕದಲ್ಲಿ ಬೆಂಕಿ ಬಿದ್ದು 10 ರೋಗಿಗಳು ಮೃತಪಟ್ಟಿದ್ದಾರೆ. ಹಲವು ರೋಗಿಗಳಿಗೆ ತೀವ್ರ ಗಾಯವಾಗಿದೆ. ಬೆಂಕಿ ಬಿದ್ದ ಐಸಿಯುನಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಎಂದು ಅಹ್ಮದ್ನಗರ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ ಖಚಿತಪಡಿಸಿದ್ದಾರೆ.ಐಸಿಯುಗೆ ಬೆಂಕಿಬಿದ್ದ ಹಿನ್ನೆಲೆಯಲ್ಲಿ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.



