ದಾವಣಗೆರೆ: ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ನಿವೃತ್ತ ಸೈನಿಕರ ಸಂಘನೆಗಳ ಪದಾಧಿಕಾರಿಗಳ ಹಾಗೂ ಸದಸ್ಯರ ವಾರ್ಷಿಕ ಸಭೆಯನ್ನು ನ.10 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಆಸಕ್ತ ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರು ಸಭೆಯಲ್ಲಿ ಭಾಗವಹಿಸಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-220925 ನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



