ದಾವಣಗೆರೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ದಾವಣಗೆರೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಒಕ್ಕೂಟ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಇಫ್ಕೋ ಸಂಸ್ಥೆ, ಕ್ರಿಬ್ಕೋ ಲಿಮಿಟೆಡ್ ಹಾಗೂ ತಾಲ್ಲೂಕಿನ ಪತ್ತಿನ ಸಹಕಾರ ಸಂಘ ಸಹಯೋಗದೊಂದೊಗೆ ನ.14ರಿಂದ 21ರ ವರೆಗೆ ಜಿಲ್ಲೆಯಲ್ಲಿ 68ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಯೋಜಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಅಧ್ಯಕ್ಷ ಎನ್.ಎ.ಮುರುಗೇಶ್, ಈ ಸಪ್ತಾಹದ ಪ್ರಯುಕ್ತ ಜಿಲ್ಲೆಯ ಎಲ್ಲಾ ಸಹಕಾರ ಕಟ್ಟಡಗಳ ಮೇಲೆ ನ.14ರಂದು ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ನಡೆಯಲಿದೆ. ಅಂದು ಬೆಳಿಗ್ಗೆ 11.30ಕ್ಕೆ ನಗರದ ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ನಲ್ಲಿ ಸಪ್ತಾಹಕ್ಕೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ಎ.ರವೀಂದ್ರನಾಥ್, ಮಹಾನಗರ ಪಾಲಿಕೆ ಮೇಯರ್ ಎಸ್.ಟಿ.ವೀರೇಶ್, ದೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಅಧ್ಯಕ್ಷ ಜೆ.ಎಸ್.ವೇಣುಗೋಪಾಲ ರೆಡ್ಡಿ, ಶಿಮೂಲ್ ಪ್ರಭಾರ ಅಧ್ಯಕ್ಷ ಎಚ್,ಕೆ.ಬಸಪ್ಪ, ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಜಗದೀಶಪ್ಪ ಬಣಕಾರ್, ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಬಿ.ವಿ.ಚಂದ್ರಶೇಖರಪ್ಪ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
- 7 ದಿನ ಕಾರ್ಯಕ್ರಮದ ವಿವರ
- ನ.15ರಂದು ರಾಮಗೊಂಡನಹಳ್ಳಿಯ ಬಯಲು ರಂಗಮಂದಿರದಲ್ಲಿ ಸಹಕಾರಿ ಮಾರಾಟ, ಗ್ರಾಹಕ, ರೂಪಾಂತರ ಮತ್ತು ಮೌಲ್ಯ ವರ್ಧನೆ
- ನ.16ರಂದು ಚನ್ನಗಿರಿಯ ಮೌದ್ಗಿಲ್ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಹಕಾರ ಸಂಸ್ಥೆಗಳ ವ್ಯಾಪಾರ ಸುಲಭೀಕರಣ
- ನ.17ರಂದು ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅನ್ವೇಷಣೆ ತ್ವರಿತಗೊಳಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಉದ್ಯೋಗ ಸೃಷ್ಟಿ ಮತ್ತು ವೃತ್ತಿಪರತೆ
- ನ.18ರಂದು ಹರಿಹರದ ಐರಣಿ ಸಿದ್ದರೂಢಢ ಮಠದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಮತ್ತು ಸಾರ್ವಜನಿಕ, ಖಾಸಗಿ ಸಹಕಾರಿ ಪಾಲುದಾರಿಕೆ ಬಲಪಡಿಸುವ ಕಾರ್ಯಕ್ರಮ
- ನ.19ರಂದು ನ್ಯಾಮತಿ ತಾಲ್ಲೂಕಿನ ಶಿವ ಪತ್ತಿನ ಸಹಕಾರಿ ಸಂಘದ ಆವಣದಲ್ಲಿ ಯುವಜನ, ಮಹಿಳಾ ಮತ್ತು ಅಬಲವರ್ಗದವರಿಗಾಗಿ ಸಹಕಾರ ಸಂಸ್ಥೆಗಳ ಕುರಿತು
- ನ.20ರಂದು ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿಯ ಕಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ, ಡಿಜಿಟಲೀಕರಣ ಮತ್ತು ಸಾಮಾಜಿಕ ಜಾಲತಾಣ ವಿಷಯ ಕುರಿತು ಜಾಗೃತಿ ಕಾರ್ಯಕ್ರಮ
- ನ.21ರಂದು ಜಗಳೂರಿನಲ್ಲಿ ಸಮಾರೋಪ ಸಮಾರಂಭ
ಈ ಸಂದರ್ಭದಲ್ಲಿ ಸಿರಿಗೆರೆ ರಾಜಣ್ಣ, ಆರ್.ಜಿ.ಶ್ರೀನಿವಾಸಮೂರ್ತಿ, ಕುಬೇರಪ್ಪ, ಕೆ.ಎಚ್.ಸಂತೋಷಕುಮಾರ್, ಕೆ.ಎಂ.ಜಗದೀಶ ಉಪಸ್ಥಿತರಿದ್ದರು.



