ನವದೆಹಲಿ: ವಿಪಕ್ಷಗಳ ತೀವ್ರ ವಿರೋಧಕ್ಕೆ ಮಣಿದ ಕೇಂದ್ರ ಸರ್ಕಾರ, ಜಾರಿಗೆ ತರಲು ಉದ್ದೇಶಿಸಿದದ್ದ ಮೂರು ಕೃಷಿ ಕಾಯ್ದೆಗಳ ಕಾನೂನುಗಳನ್ನು ವಾಪಸ್ ಪಡೆದಿದೆ.
ಬೆಳಗ್ಗೆ ದೇಶ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ತಿಳಿಸಿದರು. ಕಳೆದ ಒಂದು ವರ್ಷಗಳಿಂದ ರೈತರು ನಿರಂತರವಾಗಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಕೊನೆಗೂ ರೈತರ ಪ್ರತಿಭಟನೆಗಳಿಗೆ ಮಣಿದಿರುವ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆದು ಮಹತ್ವದ ನಿರ್ಧಾರ ಕೈಗೊಂಡಿದೆ.
ಶ್ರೀ ಗುರುನಾನಕ್ ದೇವ್ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ ನಂತರ ಕರ್ತಾರ್‌ಪಿರ್ ಕಾರಿಡಾರ್ ಮತ್ತೆ ತೆರೆದಿರುವುದು ಸಂತಸ ತಂದಿದೆ. ಗುರುನಾನಕ್ ಅವರು ‘ವಿಚ್ ದುನಿಯಾ ಸೇವ್ ಕಮೈಯೆ, ತಾನ್ ದರ್ಗಾ ಬೈಸನ್ ಪೈಯೆಯಾ’ ಎಂದು ಹೇಳಿದ್ದರು.
ನಾವು ಎಲ್ಲಾ 3 ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ತಿಂಗಳು ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ಕಾರ್ಯವಿಧಾನವನ್ನು ಪ್ರಾರಂಭಿಸುತ್ತೇವೆ. ರೈತರು ತಮ್ಮ ಕುಟುಂಬಗಳಿಗೆ ಮರಳಲು ನಾನು ಒತ್ತಾಯಿಸುತ್ತೇನೆ. ಯಾವುದೇ ಪ್ರತಿಭಟನೆಗಳು ಮಾಡದಂತೆ ಪ್ರಧಾನಿ ಮೋದಿ ಮನವಿ ಮಾಡಿದರು.



