Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

loans 1

ದಾವಣಗೆರೆ

ದಾವಣಗೆರೆ: ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್‍ನಲ್ಲಿ ಆಯ್ಕೆಯಾದ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್, ನೀಟ್, ಬಿ.ಟೆಕ್, ಬ್ಯಾಚುಲರ್ ಅಫ್ ಆರ್ಕಿಟೆಕ್ಚರ್ ಮತ್ತು ಆಯುಷ್ ಪದವಿ ಕೋರ್ಸ್‍ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ರಿನ್ಯೂವಲ್ ಸಾಲ ಯೋಜನೆಯಡಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಹಿಂದಿನ ವರ್ಷದಲ್ಲಿ ನಿಗಮದಿಂದ ಪಡೆದಿರುವ ಒಟ್ಟು ಸಾಲದ ಬಾಕಿಯ ಮೊತ್ತದ ಶೇ.12% ರಷ್ಟನ್ನು ಆಯಾ ಜಿಲ್ಲಾ ಕಚೇರಿಗಳಲ್ಲಿ ಪಾವತಿಸಿರಬೇಕು. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳವರು ಡಿ.20 ರೊಳಗಾಗಿ ನಿಗಮದ ವೆಬ್‍ಸೈಟ್ kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಮೂಲ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃಧ್ಧಿ ನಿಗಮ(ನಿ), ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ – 577002 ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಫೋ.ನಂ: 08192-232349 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top