Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರಿಗೆ ತುರ್ತು ಬೆಳೆ ಪರಿಹಾರ ನೀಡಲು ಕ್ರಮ; ಜಿಲ್ಲೆಯಲ್ಲಿ 90 ಕೋಟಿ ಹಾನಿ; ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ

byrathi bsavaraja

ದಾವಣಗೆರೆ

ದಾವಣಗೆರೆ: ರೈತರಿಗೆ ತುರ್ತು ಬೆಳೆ ಪರಿಹಾರ ನೀಡಲು ಕ್ರಮ; ಜಿಲ್ಲೆಯಲ್ಲಿ 90 ಕೋಟಿ ಹಾನಿ; ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ

ದಾವಣಗೆರೆ: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಬೆಳೆ ಕಳೆದುಕೊಂಡಿರುವ ಎಲ್ಲಾ ರೈತರಿಗೆ ತುರ್ತು ಬೆಳೆ ಹಾನಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಪ್ರಥಾಮಿಕ ವರದಿ ಪ್ರಕಾರ ಜಿಲ್ಲೆಯಲ್ಲಿ 90 ಕೋಟಿ ರೂಪಾಯಿ ಬೆಳೆ ಹಾನಿಯಾಗಿದೆ  ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುರ್ತು ಪರಿಹಾರ  ಸರ್ಕಾರ ಜಿಲ್ಲಾಡಳಿತಕ್ಕೆ 97 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದು, ಈಗಾಗಲೇ ಪರಿಹಾರ ನೀಡಲಾಗಿದೆ. ಯಾರಿಗೆ ಪರಿಹಾರ ಸಿಕಿಲ್ಲವೋ ಅವರಿಗೆ ಶೀಘ್ರವೇ ಪರಿಹಾರ ತಲುಪಿಸಲಾಗುವುದು.  ವಿಧಾನ ಪರಿಷತ್ ಚುನಾವಣೇ  ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ.  ನಾನು ಮಳೆಯಿಂದ ಹಾನಿಗೊಂಡ ಪ್ರದೇಶಕ್ಕೆ ಭೇಟಿ ನೀಡಲು ಸಾಧ್ಯವಾಗಿಲ್ಲ.  ಆದರೆ, ಜಿಲ್ಲಾಧಿಕಾರಿ, ಸಿಇಒ ಮತ್ತು ಎಸ್‌ಪಿ ಅವರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಬೆಳೆ ಹಾನಿ ಪರಿಹಾರವನ್ನು ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು.

ಜಿಲ್ಲೆಯಲ್ಲಿ 90 ಕೋಟಿ ರೂ. ಮೌಲ್ಯದ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಗೆ ಒಳಗಾಗಿರುವುದು ತಿಳಿದು ಬಂದ್ದು, ಅಧಿಕಾರಿಗಳಿಂದ ಇನ್ನೊಮ್ಮೆ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.  ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡುತ್ತೇನೆ.ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಮಳೆಯಲ್ಲಿ ಸಿಲುಕಿ, ಗೋಡೆ ಕುಸಿದು ಮೃತಪಟ್ಟ ಮೂರು ಜನರಿಗೆ ಈಗಾಗಲೇ ಸಂಪೂರ್ಣ ಪಡಿಹಾರ ನೀಡಲಾಗಿದ್ದು, ಇನ್ನೂ ಇಬ್ಬರು ರೈತರು ಬೆಳೆ ಹಾನಿಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಅವರಿಗೂ ಪರಿಹಾರ ಕೊಡಲಾಗುವುದು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top