ದಾವಣಗೆರೆ: ಮಹಾರಾಷ್ಟ್ರದ ನಾಸಿಕ್ನಲ್ಲಿ ಕಳೆದ ನ.11 ರಿಂದ 14 ರವರೆಗೆ ನಡೆದ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿ ಪದಕ ಪಡೆದುಕೊಂಡಿದ್ದಾರೆ. ನಾಗರಾಜಪ್ಪ ಅವರು 10 ಸಾವಿರ ಮೀ. ಓಟದಲ್ಲಿ ಪ್ರಥಮ, 5 ಸಾವಿರ ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಲಕ್ಷ್ಮಣ್ ರಾವ್ ಸಾಲಂಕಿ ಅವರು 10 ಸಾವಿರ ಮೀ. ಓಟದಲ್ಲಿ ತೃತೀಯ ಸ್ಥಾನ, 5 ಸಾವಿರ ಮೀ. ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಸಂತೋಷ್.ಡಿ ಅವರು 5 ಸಾವಿರ ಮೀ. ಓಟದಲ್ಲಿ ದ್ವಿತೀಯ ಸ್ಥಾನ, 3 ಸಾವಿರ ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಕೀರ್ತಿ ತಂದ ಇವರು ಕಾನೂನು ಕಾಲೇಜು ವಿದ್ಯಾರ್ಥಿ ಹಾಗೂ ಕ್ರೀಡಾಪಟು ಆದ ಸಂತೋಷ್.ಡಿ ಅವರ ಬಳಿ ತರಬೇತಿ ಪಡೆದುಕೊಂಡಿದ್ದರು.
ವಿಜೇತರಾದ ಕ್ರೀಡಾಪಟುಗಳಿಗೆ ಹಾಗೂ ತರಬೇತುದಾರರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ, ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.



