ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಹೇಳಿದರು.
ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿಕೆ ಪ್ರತಿಕ್ರಿಸಿ, ಸಿಎಂ ಬದಲಾವಣೆ ಹೇಳಿಕೆ ಕೊಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಪಕ್ಷದಲ್ಲಿ ಗೊಂದಲ ಸೃಷ್ಟಿಸುವಂತೆ ಯಾರೂ ನಡೆದುಕೊಳ್ಳಬಾರದು. 2023 ರ ಚುನಾವಣಾ ನಂತರ ಹೈ ಕಮಾಂಡ್ ಯಾರಿಗೆ ಸೂಚಿಸುತ್ತೋ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.
ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಬಗ್ಗೆ ತನಿಖೆ ನಂತರ ಎಲ್ಲಾ ಸತ್ಯ ಹೊರಬರಲಿದೆ. ತಪ್ಪು ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.



