ಚೆನ್ನೈ: ಭಾರತೀಯ ಸೇನೆಯ ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17 ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಪತನವಾಗಿದೆ.
ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು ಕಡೆಗೆ ಹೊರಟಿದ್ದಾಗ ಈ ಘಟನೆ ಸಂಭವಿಸಿದೆ. ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸಾವು –ನೋವುಗಳು ಬಗ್ಗೆ ಮಾಹಿತಿ ಇಲ್ಲ. ಹೆಲಿಕಾಪ್ಟರ್ ನಲ್ಲಿ ಭಾರತೀಯ ಸೇನೆಯ ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಸೇರಿದಂತೆ ಉನ್ನತ ಅಧಿಕಾರಿಗಳು ಇದ್ದರು ಎಂದಷ್ಟೇ ತಿಳಿದು ಬಂದಿದೆ.
#WATCH | Latest visuals from the spot (between Coimbatore and Sulur) where a military chopper crashed in Tamil Nadu. CDS Bipin Rawat, his staff and some family members were in the chopper. pic.twitter.com/6oxG7xD8iW
— ANI (@ANI) December 8, 2021