ದಾವಣಗೆರೆ: ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ಕಾರು ಮತ್ತು ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸಹ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಾಗಿದ್ದು, ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಬೈಕ್ ನಲ್ಲಿದ್ದ ವಿದ್ಯಾರ್ಥಿನಿ ಫುಟ್ ಪಾತ್ ಕಾರಿಡಾರ್ ಗೆ ಬಿದ್ದ ಪರಿಣಾಮ ತೆಲೆಗೆ ಬಲವಾದ ಪೆಟ್ಟು ಬಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿ ತಲೆಗೆ ಹಾಫ್ ಹೆಲ್ಮೆಟ್ ಹಾಕಿದ್ದರಿಂದ ತೆಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.



