ಕೋಲಾರ: ಕೋಲಾರ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಮತ್ತು ಆಡಳಿತಾಧಿಕಾರಿ ಗುತ್ತಿಗೆದಾರನಿಂದ 25 ಸಾವಿರ ಲಂಚ ಸ್ವೀಕರಿಸುವಾಗಲೇ ಎಸಿಬಿ ಬಲೆಗೆ ಬಿದ್ದಿದ್ದಾರೆ.
25,000 ರೂ. ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಮತ್ತು ಮುಖ್ಯ ಆಡಳಿತಾಧಿಕಾರಿ ಅವರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಆಸ್ಪತ್ರೆಗೆ ವಸ್ತು ಸರಬರಾಜು ಮಾಡಿದ್ದ ಕಿರಣ್ ಕುಮಾರ್ ಅವರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕೊರೊನಾ ವೇಳೆ ಆಸ್ಪತ್ರೆಗೆ ಪ್ಲೇಟ್, ಲೋಟ ಪೂರೈಕೆ ಮಾಡಿದ ಸರಬರಾಜುದಾರ ಕಿರಣ್ ಕುಮಾರ್ ಅವರಿಂದ ಬಿಲ್ ಮಂಜೂರಾತಿ ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.



