ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿ ವೇತನ ಪಡೆಯಲು ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನ ವಿದ್ಯಾರ್ಥಿಗಳು ಉತ್ತಮ ವಿದ್ಯಾರ್ಥಿವೇತನ ಪಡೆಯುವುದಕ್ಕಾಗಿ, ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ವೆಬ್ಸೈಟ್ ವಿಳಾಸ: https://ssp.prematric.karnataka.gov.in// ನಲ್ಲಿ ನೋಂದಣಿ ಮಾಡಿಕೊಂಡು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಎಂಆರ್ಡಬ್ಲ್ಯೂಗಳಾದ ಬಿ.ಚನ್ನಪ್ಪ ಮೊ.ಸಂ: 9590829024, ಶೈಲಜಾ.ಕೆ.ಎಂ. ಮೊ.ಸಂ: 9886366809, ಸುಬ್ರಮಣ್ಯ.ಕೆ ಮೊ.ಸಂ: 9945738141, ಶಿವನಗೌಡ ಎಂ.ಕೆ ಮೊ.ಸಂ 9902105734, ಶಶಿಕಲಾ.ಟಿ ಮೊ.ಸಂ: 9945458058 ಇವರನ್ನು ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ಸಬಲೀಕರಣ ಅಧಿಕಾರಿಗಳ ಕಚೇರಿ ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ ಎಂ.ಸಿ.ಸಿ.ಬಿ ಬ್ಲಾಕ್ ದಾವಣಗೆರೆ ದೂ.ಸಂ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



