ದಾವಣಗೆರೆ: ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್ನವರು ಮುಂದಿನ ದಿನಗಳಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಹಾಗೂ ಗುಮಾಸ್ತರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಿಂದ 45 ದಿನಗಳ ತರಬೇತಿ ಆಯೋಜಿಸಿದೆ.
ಆಸಕ್ತ ಅಭ್ಯರ್ಥಿಗಳು ತರಬೇತಿಗಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಆಸಕ್ತರು ಜ. 05 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821-2515944 ಕ್ಕೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.