ಡಿವಿಜಿ ಸುದ್ದಿ, ಮೈಸೂರು: ಹಲ್ಲೆಗೆ ಒಳಗಾಗಿ ಆಸ್ಪತ್ರೆ ಸೇರಿರುವ ಮಾಜಿ ಸಚಿವ, ಶಾಸಕ ತನ್ವೀರ್ ಸೇಠ್ ಅವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಭದ್ರತೆ ಒದಗಿಸಿದೆ.
ಇತ್ತೀಚೆಗೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತನ್ವೀರ್ ಸೇಠ್ ಅವರಿಗೆ ಯುವಕನೋರ್ವ ಕುತ್ತಿಗೆಗೆ ಚಾಕು ಹಾಕಿದ್ದ. ಈ ಘಟನೆಯ ಸಂಬಂಧ ಗನ್‍ಮ್ಯಾನ್ ಫೈರೋಜ್ ಖಾನ್ ಅಮಾನತು ಮಾಡಲಾಗಿತ್ತು. ಇದೀಗ ತನ್ವೀರ್ ಸೇಠ್ ಅವರಿಗೆ ಮೂರು ಪಟ್ಟು ಹೆಚ್ಚಿನ ಭದ್ರತೆ ನೀಡಲಾಗಿದೆ.
ತನ್ವೀರ್ ಸೇಠ್ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾಳೆ ವಾರ್ಡ್ ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.
ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಮೈಸೂರು ಪೊಲೀಸರು, ಹಲವಾರು ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ.ಆರೋಪಿ ಫರಾನ್ ಪಾಷಾ ತನ್ವೀರ್ ಸೇಠ್ ಅವರ ಹತ್ಯೆಗೆ ಯತ್ನ ಮಾಡುವ ಹಿಂದಿನ ರಾತ್ರಿ ಬಾಲಿವುಡ್‍ನ ‘ವಾಸ್ತವ್’ ಸಿನಿಮಾವನ್ನು ಐದಾರು ಬಾರಿ ನೋಡಿದ್ದ ಎಂದು ಅವನ ಸ್ನೇಹಿತರು ಹೇಳಿದ್ದಾರೆ.