ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 3 ರವರಗೆ ವಿಸ್ತರಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.inಟಿ ನ್ನು ನೋಡಬಹುದು. ಹೆಚ್ಚಿನ ವಿವರಗಳಿಗೆ
www.bcwd.karnataka.gov.in ನ್ನು ಸಂಪರ್ಕಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.inಟಿ ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 080-8050370006.



