ನವದೆಹಲಿ: ರೈತರಿಗೆ ಹೊಸ ವರ್ಷಕ್ಕೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (. PM-KISAN) ಹಣ ಬಿಡುಗಡೆಯಾಗಲಿದೆ. 2022ರ ಜನವರಿ 1 ರಂದು 20 ಸಾವಿರ ಕೋಟಿ ರೂಪಾಯಿ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. 10 ಕೋಟಿಗೂ ಅಧಿಕ ರೈತರ ಖಾತೆಗೆ ಹಣ ತಲಾ 2ಸಾವಿರ ಬಿಡುಗಡೆ ಆಗಲಿದೆ. ಇದುವರೆಗೆ 1.6 ಲಕ್ಷ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಪಿಎಂ-ಕಿಸಾನ್ ಯೋಜನೆಯಡಿ 10ನೇ ಕಂತಿನ ಆರ್ಥಿಕ ಪ್ರಯೋಜನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 1, 2022 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಮಾಹಿತಿ ನೀಡಿದೆ. 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತ ವರ್ಗಾಯಿಸಲಾಗುವುದು. ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ 6000 ರೂ. ನೀಡಲಾಗುತ್ತದೆ. ತಲಾ 2000 ರೂ.ರಂತೆ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುತ್ತದೆ.



