ಬೆಂಗಳೂರು: ಜ. 26ರ ಗಣರಾಜ್ಯೋತ್ಸವ ದಿನದಂದು ರೈತರ ಮನೆ ಬಾಗಿಲಿಗೆ ಉಚಿತ ಪಹಣಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 26 ರಂದು ಕಂದಾಯ ಇಲಾಖೆಯಿಂದ ಹಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಾಗುವುದು. ಈ ಪೈಕಿ ಪಹಣಿಯನ್ನು ಉಚಿತವಾಗಿ ನೀಡಲಾಗುವುದು. ಒಂದೇ ದಿನದಲ್ಲಿ ಪಹಣಿ ನೀಡುವ ಕೆಲಸ ಮಾಡಲಿದ್ದೇವೆ. 45 ಲಕ್ಷ ರೈತರಿಗೆ ಮನೆ ಬಾಗಿಲಿಗೆ ಪಹಣಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.



