ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಮತ್ತು ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳ ಹಿನ್ನಲೆ ಸರ್ಕಾರ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದೆ. ಆದರೆ, ಈ ಕರ್ಫ್ಯೂ ವೇಳೆ ವೇಳೆ ಕೆಎಸ್ ಆರ್ ಟಿಸಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಯಥಾಸ್ಥಿತಿ ಮುಂದುವರಿಯಲಿದೆ.
ವೀಕೆಂಡ್ ಕರ್ಪ್ಯೂ ವೇಳೆ ಕೆಎಸ್ ಆರ್ ಟಿಸಿ ಬಸ್ ಸೇವೆ ಯಥಾ ಸ್ಥಿತಿ ಇರಲಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಗಳ ಸಂಚಾರಿಸಲಿವೆ. ರಾಜ್ಯ, ಹೊರ ರಾಜ್ಯಗಳ ನಡುವೆ ಕೂಡ ಬಸ್ ಸಂಚಾರ ಇರಲಿದ್ದು, ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ ಎಂದು ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮಾಹಿತಿ ತಿಳಿಸಿದ್ದಾರೆ



