ಡಿವಿಜಿ ಸುದ್ದಿ, ದಾವಣಗೆರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಗಿರಿಜನ ಉಪಯೋಜನೆಯಡಿ ಎಸ್ಸಿ, ಎಸ್ಟಿ ಪತ್ರಿಕೋದ್ಯಮ ಪದವಿ ವಿದ್ಯಾರ್ಥಿಗಳಿಗೆ 10 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.
ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಪ್ರಬುದ್ದತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಬ್ಬರು ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮಾಸಿಕ ರೂ.15 ಸಾವಿರ ಶಿಷ್ಯ ವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿ.05 ಕೊನೆಯ ದಿನ.
ವಿಳಾಸ: ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದೇವರಾಜ ಅರಸ್ ಬಡಾವಣೆ, ಪಿ.ಬಿ.ರೋಡ್ ದಾವಣಗೆರೆ-577006. ಹೆಚ್ಚಿನ ಮಾಹಿತಿಗೆ: 08192-254892 ನ್ನು ಸಂಪರ್ಕಿಸಿ.