ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಇಂದಿನಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಜ.19ರವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ರಾತ್ರಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದ್ದು, ಹೀಗಾಗಿ ನಾಳೆ (ಜ.8) ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರಕಟಣೆ ಹೊರಡಿಸಿದ್ದು, ಓಮಿಕ್ರಾನ್, ಕೊರೊನಾ ನಿಯಂತ್ರಣದ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ರಾತ್ರಿ 10 ಗಂಟೆಯಿಂದ, ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯಾಧ್ಯಂತ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿಸೆ. ಈ ಅವಧಿಯಲ್ಲಿ ಶನಿವಾರಗಳಂದು ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ನಡೆಸದಿರಲು ಕ್ರಮವಹಿಸುವಂತೆ ಆಯಾ ಜಿಲ್ಲೆಗಳ ಉಪ ನಿರ್ದೇಶಕರುಗಳಿಗೆ ತಿಳಿಸಿದ್ದಾರೆ.



