Connect with us

Dvgsuddi Kannada | online news portal | Kannada news online

ದಾವಣಗೆರೆ: ನಿಯಮಬಾಹಿರವಾಗಿ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ವಾಹನ ಸೌಲಭ್ಯ; 10 ಲಕ್ಷ ದುಂದುವೆಚ್ಚ-ಕಾಂಗ್ರೆಸ್ ಆರೋಪ

ದಾವಣಗೆರೆ

ದಾವಣಗೆರೆ: ನಿಯಮಬಾಹಿರವಾಗಿ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ವಾಹನ ಸೌಲಭ್ಯ; 10 ಲಕ್ಷ ದುಂದುವೆಚ್ಚ-ಕಾಂಗ್ರೆಸ್ ಆರೋಪ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ನಿಯಮಬಾಹಿರವಾಗಿ ವಾಹನ ಸೌಲಭ್ಯ  ಕಲ್ಪಿಸಲಾಗಿದೆ. ಇದರಿಂದ 10 ಲಕ್ಷ ಹಣ ಪಾಲಿಕೆಗೆ ದುಂದುವೆಚ್ಚವಾಗಿದೆ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಈ ಬಗ್ಗೆ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್‌  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2017ರಲ್ಲಿ ರಾಜ್ಯ ಸರ್ಕಾರವು ಮೇಯರ್‌ ಹಾಗೂ ಉಪಮೇಯರ್‌ ಹೊರತುಪಡಿಸಿ ಮತ್ತೆ ಯಾವುದೇ ಚುನಾಯಿತ ಜನಪ್ರತಿನಿಧಿಗಳಿಗೆ ವಾಹನ ಸೌಲಭ್ಯ ಕಲ್ಪಿಸಬಾರದು ಎಂದು ಆದೇಶ ಹೊರಡಿಸಿದೆ. ಹೀಗಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ವಾಹನ ಸೌಲಭ್ಯ ಕಲ್ಪಿಸುವುದಕ್ಕೆ  ನಾವು ಸಾಮಾನ್ಯ ಸಭೆಯಲ್ಲಿ  ವಿರೋಧ ವ್ಯಕ್ತಪಡಿಸಿದ್ದೇವು.

ಇದರ ಹೊರತಾಗಿಯೂ ಪಾಲಿಕೆ ಆಯುಕ್ತರು ಪ್ರತಿ ತಿಂಗಳು ಒಂದು ಕಾರಿಗೆ  30 ಸಾವಿರದಂತೆ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷರಿಗೆ ವಾಹನ ಸೌಲಭ್ಯ ಕಲ್ಪಿಸಿದ್ದಾರೆ. ಇದರಿಂದ ತಿಂಗಳಿಗೆ 1.20 ಲಕ್ಷ ವೆಚ್ಚ ಮಾಡಲಾಗಿದೆ. ಇದೇ ರೀತಿ ಎಂಟು ತಿಂಗಳಿಂದ  ದುಂದು ವೆಚ್ಚವಾಗಿದೆ. ಈ ಬಗ್ಗೆ ಪೌರಾಡಳಿತ ನಿರ್ದೇಶನಾಲಯವು ಪಾಲಿಕೆ ಆಯುಕ್ತರಿಗೆ ಪತ್ರವನ್ನು ಬರೆದು ಕೂಡಲೇ ವಾಹನ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಸೂಚಿದದ್ದರೂ, ಆಯುಕ್ತರು ವಾಹನ ಸೌಲಭ್ಯ ಹಿಂದಕ್ಕೆ ಪಡೆದಿಲ್ಲ. ಹೀಗಾಗಿ ದುಂದು ವೆಚ್ಚವನ್ನು ಪಾಲಿಕೆ ಆಯುಕ್ತರಿಂದಲೇ ವಸೂಲಿ ಮಾಡಬೇಕು  ಎಂದು ಆಗ್ರಹಿಸಿದರು.

ಇನ್ನು ವಾಣಿಜ್ಯ ಮಳಿಗೆ ಕಸ ಸಂಗ್ರಹಿಸಲು ಏಜೆನ್ಸಿಗಳಿಗೆ ಗುತ್ತಿಗೆ ನೀಡಲಾಗಿದೆ. ಈ ಏಜೆನ್ಸಿಗಳು 50 ಸಾವಿರ ಠೇವಣಿ ಹಣ ಕಟ್ಟಿಲ್ಲ. ಕಸ ಸಂಗ್ರಹಿಸುವುದರಿಂದ ಬಂದ ಶುಲ್ಕದ ಶೇ.30ರಷ್ಟನ್ನು ಪಾಲಿಕೆ ನೀಡಬೇಕು. ಅದನ್ನು ನೀಡಿಲ್ಲ.ಏಜೆನ್ಸಿಯವರು ವಾಣಿಜ್ಯ ಮಳಿಗೆ ಅವರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಆರೋಪಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ  ಗಡಿಗುಡಾಳ್‌ ಮಂಜುನಾಥ್‌, ಕೆ.ಚಮನ್‌ ಸಾಬ್‌, ಅಬ್ದುಲ್‌ ಲತೀಫ್‌ ಉಪಸ್ಥಿತರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top