ಬೆಳ್ತಂಗಡಿ: ಸರಕಾರ ಕೈಗೊಂಡಿರುವ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಇಂದು (ಜ.08) ಮತ್ತು ನಾಳೆ (ಜ.09) ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ.ಸರಕಾರದ ಮಾರ್ಗಸೂಚಿಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮುಂದಿನ ಆದೇಶದ ವರೆಗೆ ಆನ್‌ಲೈನ್ ಬುಕ್ಕಿಂಗ್‌ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ದೇಗುಲದ ಪ್ರಕಟಣೆಯಲ್ಲಿ ತಿಳಿಸಿದೆ.



