ದಾವಣಗೆರೆ: ನಗರದ 6ನೇ ವಾರ್ಡ್ ವಿಜಯನಗರ ಬಡಾವಣೆಯಲ್ಲಿ ಅಂದಾಜು 1.75 ಕೋಟಿ ರೂ ಮೊತ್ತದ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಅಭಿವೃದ್ಧಿ ಕಾಮಗಾರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಧೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್, ಉಪ ಮೇಯರ್ ಶಿಲ್ಪಾ ಜಯಪ್ರಕಾಶ್, ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಧೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಎಲ್.ಡಿ.ಗೋಣೆಪ್ಪ ಹಾಗೂ ಇತರರು ಉಪಸ್ಥಿತರಿದ್ದರು.



