ಡಿವಿಜಿ ಸುದ್ದಿ, ದಾವಣಗೆರೆ: ಟಿವಿ5 ಕನ್ನಡ ಸುದ್ದಿ ವಾಹಿನಿಯು ನ.24 ರಂದು ಭಾನುವಾರ ಸಂಜೆ 5 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಶ್ರೀ ಶಿವ ಪಾರ್ವತಿ ಕಲ್ಯಾಣೋತ್ಸವ ಹಾಗೂ ಶೋಭಾಯಾತ್ರೆಯನ್ನು ಆಯೋಜಿಸಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀಮದ್ ಉಜ್ಜಯಿನಿ ಮಠದ ಶ್ರೀಸಿದ್ಧಲಿಂಗೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ , ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಬಾಳೆ ಹೊನ್ನೂರು ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಗೋವಿಂದ್ ಕಾರಜೋಳ, ಅಶ್ವತ್ಥ್ ನಾರಾಯಣ , ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಜಗದೀಶ್ ಶೆಟ್ಟರು, ಕೆ.ಎಸ್ . ಈಶ್ವರಪ್ಪ, ಆರ್. ಅಶೋಕ್, ವಿ. ಸೋಮಣ್ಣ, ಸಿ.ಸಿ. ಪಾಟೀಲ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕ ಶಾಮನೂರು ಶಿವಶಂಕರಪ್ಪ ಎಸ್.ಎ. ರವೀಂದ್ರನಾಥ್ ಭಾಗಿಯಾಗಲಿದ್ದಾರೆ.
ನಗರದ ಪ್ರಮುಖ ಬೀದಿಗಳಲ್ಲಿ ಶಿವ-ಪಾರ್ವತಿ ಶೋಭಾಯಾತ್ರೆ ನಡೆಯಲಿದ್ದು,ತಾಳ-ಮೇಳ, ಮಂಗಳ ವಾದ್ಯ , ವೇದ ಮಂತ್ರ ಘೋಷಣೆ ನಡೆಯಲಿದೆ. ಕಲ್ಯಾಣಕ್ಕೂ ಮುನ್ನ ಅಘೋರ ನೃತ್ಯ, ಶಿವತಾಂಡವ, ಡೊಳ್ಳು ಕುಣಿತ, ನಂದಿ ಧ್ವಜ ಮೆರವಣಿಗೆ ನಡೆಯಲಿದೆ.