ದಾವಣಗೆರೆ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡಮಾಡುವ ನಾರಿಶಕ್ತಿ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಸಮಾಜದಲ್ಲಿನ ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಮಹಿಳೆಯರು ನಾರಿಶಕ್ತಿ ಪುರಸ್ಕಾರಕ್ಕಾಗಿ ವೆಬ್‍ಸೈಟ್ www.awards.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.31 ಕೊನೆ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಂ.ಸಿ.ಸಿ. ಬಿ ಬ್ಲಾಕ್, 14ನೇ ಕ್ರಾಸ್, ಕುವೆಂಪು ನಗರ, ದಾವಣಗೆರೆ-04, ದೂರವಾಣಿ 08192-264056 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.



